ಅದ್ಯಾಯ 1

ಪೀಠಿಕೆ 1 ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ - 2 ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು ಶಾಂತಿಯೂ ಉಂಟಾಗಲಿ. ದೇವರು ಕ್ರಿಸ್ತನಲ್ಲಿ ಅನುಗ್ರಹಿಸಿದ ಆತ್ಮಿಕ ವರಗಳಿಗಾಗಿ ಪೌಲನು ಮಾಡುವ ಸ್ತೋತ್ರ 3 ಕರ್ತನಾದ ಯೇಸುಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮಿಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ. 4 ಆತನ ಸನ್ನಿಧಿಯಲ್ಲಿ ಪರಿಶುದ್ಧರೂ, ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಚುನಿಲಿಧು 5 ತನ್ನ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿಸಿಕೊಳ್ಳಲು ಮೊದಲೇ ನಿರ್ಧರಿಸಿದ್ದನು, 6 ಪ್ರಿಯ ಮಗನ ಮುಖಾಂತರ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಕರಿರುಸ್ 7 ನಮಗೋಸ್ಕರ ಸುರಿಸಿದ ರಕ್ತದ ಮೂಲಕ ಆತನಲ್ಲಿ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯು, ವಿಮೋಚನೆಯು ಉಂಟಾಯಿತು. 8 ಕೃಪೆಯನ್ನು ಆತನು ಎಲ್ಲಾ ಜ್ಞಾನ - ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ. 9 ತಾನು ನಿರೂಪಿಸಿಕೊಂಡಿದ್ದ ರಹಸ್ಯವಾದ ಸಂಕಲ್ಪವನ್ನು ತನ್ನ ಸಂತೋಷದ ಪ್ರಕಾರ ಕ್ರಿಸ್ತನಲ್ಲಿ ಅದನ್ನು ನಮಗೆ ತಿಳಿಯಪಡಿಸಿದ್ದಾನೆ, 10 ತನ್ನ ಸಂಕಲ್ಪವು ಸಂಪೂರ್ಣಗೊಂಡು ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದಾಗಿಸಬೇಕೆಂದಿದ್ದನು. 11 ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು. 12 ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು. 13 ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ. 14 ಆರಿಸಿಕೊಂಡ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನ ಮುದ್ರೆಯೇ ಆಧಾರವಾಗಿದೆ. ಮತ್ತು ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ. ದೇವಜನರ ಮಹಾಪದವಿಯ ವಿಷಯದಲ್ಲಿ ದೇವರು ಸಭೆಯವರಿಗೆ ಹೆಚ್ಚಾದ ಜ್ಞಾನವನ್ನು ದಯಪಾಲಿಸಬೇಕೆಂದು ಪೌಲನು ಕರಸ್ಥೆ ಪ್ರಾರ್ಥನೆ. 15 ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ ನಾನು ನಿಮ್ಮ ನಿಮಿತ್ತವಾಗಿ ದೇವರಿಗೆ ನಿರಂತರವಾಗಿ ಸ್ತೋತ್ರ ಮಾಡುತ್ತೇನೆ. 16 ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆ ಕರೋ – 17 ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನ ಪ್ರಕಟಣೆಗಳನ್ನೂ, ಮತ್ತು ವಿವೇಚನೆಯನ್ನೂ ನೀಡುವ ಪರಿಶುದ್ಧ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ. 18 ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ; ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬುದನ್ನೂ - 19 ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮದ ಬಲವು ಹಾಗೂ ಆತನ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ. 20 ಪರಾಕ್ರಮ ಶಕ್ತಿಯಿಂದಲೇ ದೇವರು ಯೇಸು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ; ಸಕಲ ಅಧಿಕಾರ, ಅಧಿಪತ್ಯ, ಪ್ರಭಾವ ಮತ್ತು ಪ್ರಭುತ್ವಗಳ ಮೇಲೆಯೂ, ಹಾಗೂ 21 ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಕೀರ್ತಿ ಗಳಿಸಿದ ಎಲ್ಲಾ ನಾಮಗಳ ಮೇಲೆಯೂ ಯೇಸುಕ್ರಿಸ್ತನೇ ಆಡಳಿತ ನಡೆಸುವಂತೆ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕೂರಿಸಿಕೊಂಡನು. 22 ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು. 23 ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.