ಅದ್ಯ್ಯಾಯ

ಪೌಲನು ತಾನು ಮೇಲ್ಕಂಡ ಸತ್ಯಾರ್ಥವನ್ನು ಪ್ರಕಟಿಸುವುದಕ್ಕೆ ನೇಮಕವಾದವನೂ ಅದರ ನಿಮಿತ್ತವೇ ಸೆರೆಬಿದ್ದವನೂ ಆಗಿದ್ದೇನೆಂದು ಹೇಳಿ ಅನ್ಯಜನರಾದ ಕ್ರೈಸ್ತರಿಗೋಸ್ಕರ ಪ್ರಾರ್ಥನೆ ಮಾಡಿದ್ದು. 1 ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನಂದರೆ: 2 ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ, 3 ರಹಸ್ಯವನ್ನು ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ; 4 ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಗೂಢಾರ್ಥವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು. 5 ಗೂಢಾರ್ಥವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ. 6 ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ. 7 ತನ್ನ ಶಕ್ತಿಯ ಕ್ರಿಯೆಗಳ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. 8 ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವಂತಹ ಕೃಪೆಯು 9 ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ದೇವರ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು. 10 11 ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಬಯಸಿದನು. 12 ಸನ್ನಿಧಿಯಲ್ಲಿ ಸೇರುವುದಕ್ಕೆ ನಮಗಿರುವ ಭರವಸವುಳ್ಳ ಧೈರ್ಯವು ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗೆ ಉಂಟಾಯಿತು. 13 ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಈ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ. 14 15 ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಜನರೆಲ್ಲರೂ ಗುರುತಿಸಲ್ಪಡುತ್ತಾರೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು - 16 ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ 17 ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ ಆತನು ತನ್ನ ಮಹಿಮಾತಿಶಯದ ಪ್ರಕಾರ ಕೃಪೆಯನ್ನು ಅನುಗ್ರಹಿಸಲಿ; 18 ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು ದೇವಜನರೆಲ್ಲರೊಂದಿಗೆ ಅದರ ಅಗಲ ಉದ್ದ ಎತ್ತರ ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ, 19 ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಳ್ಳಲೂ ಪೂರ್ಣಶಕ್ತರಾಗುವಂತೆ ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ. 20 ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ 21 ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. ಆಮೆನ್.