ಅದ್ಯಾಯ 5

ಸಭೆಯವರಿಗೆ ನಾನಾ ವರಗಳಿದ್ದರೂ ಎಲ್ಲರೂ ಐಕ್ಯತೆಯಿಂದಿರಬೇಕು 1 ದೇವರಿಂದ ಕರೆಯಲ್ಪಟ್ಟವರಾದ ಕಾರಣ ಯೋಗ್ಯರಾಗಿ ಜೀವಿಸಬೇಕೆಂದು ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಎಚ್ಚರಿಸುತ್ತೇನೆ. 2 ಪೂರ್ಣ ವಿನಯ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. 3 ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಆಸಕ್ತರಾಗಿರಿ. 4 ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು. 5 ಪದವಿಯನ್ನು ನಿರೀಕ್ಷಿಸುವುದಕ್ಕೆ ಕರೆಯಲ್ಪಟ್ಟವರು; ನಿಮ್ಮೆಲ್ಲರಿಗೂ ಕರ್ತನು ಒಬ್ಬನೇ, ನಂಬಿಕೆಯು ಒಂದೇ, ದೀಕ್ಷಾಸ್ನಾನ ಒಂದೇ, 6 6ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬನೇ; ಆತನು ಎಲ್ಲರ ಮೇಲಿರುವವನೂ ಎಲ್ಲರ ಮುಖಾಂತರ ಕಾರ್ಯ ನಡಿಸುವವನೂ ಎಲ್ಲರಲ್ಲಿ ವಾಸಿಸುವವನೂ ಆಗಿದ್ದಾನೆ. 7 ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ. 8 ದೇವರವಾಕ್ಯದಲ್ಲಿ ಹೀಗೆ ಹೇಳಿದೆ - <<ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಜಯಿಸಿದ ಬಹುಜನರನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು>> ಎಂಬುದಾಗಿ ಪ್ರವಾದಿಯು ಹೇಳುತ್ತಾನೆ. 9 ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ? 10 ಬಂದಾತನು ಮೇಲಣ ಎಲ್ಲಾ ಲೋಕಗಳಿಗಿಂತಲೂ ಉನ್ನತಕ್ಕೆ ಏರಿಹೋದವನೇ. ಆದ್ದರಿಂದ ಆತನು ಸಮಸ್ತ ಲೋಕಗಳನ್ನು ತುಂಬಿದವನಾದನು. 11 ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ, ನೇಮಿಸಿದನು. 12 ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಏಕತೆಯನ್ನು ಹೊಂದಿ ಪ್ರವೀಣತೆಗೆ ಬಂದವರಾಗಿ ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ 13 ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ, ಸಭೆಯ ಸೇವೆಗೋಸ್ಕರವೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ಆಶೀರ್ವದಿಸಿದನು. 14 ಇನ್ನು ಮೇಲೆ ಕೂಸುಗಳಾಗಿರಬಾರದು; ದುರ್ಜನರ ವಂಚನೆಗಳಿಗೂ, ದುರ್ಬೋಧಕರ ಕುಯುಕ್ತಿಗೂ, ಒಳಬಿದ್ದು ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರಬಾರದು. 15 ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ಬೆಳೆದು ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ. 16 ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ದಿಯನ್ನು ಹೊಂದುತ್ತದೆ. ದೇವರಿಂದ ಕರೆಯಿಸಿಕೊಂಡವರು ಅಜ್ಞಾನಿಗಳ ದುರ್ನಡತೆಯನ್ನು ಬಿಟ್ಟುಬಿಟ್ಟು ಯೋಗ್ಯರಾಗಿ ನಡೆಯಬೇಕು 17 ನಾನು ಕರ್ತನಲ್ಲಿದ್ದು ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. 18 ಮಂದ ಬುದ್ಧಿಯುಳ್ಳವರಾಗಿ ಅಂಧರಂತೆ ನಡೆದುಕೊಳ್ಳುತ್ತಾರೆ. ಅವರ ಮನಸ್ಸು ಮೊಬ್ಬಾಗಿ ಹೋಗಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ನಿತ್ಯ ಜೀವಕ್ಕೆ ದೂರವಾಗಿದ್ದಾರೆ. 19 ತಮ್ಮ ದುಸ್ಥಿತಿಯನ್ನು ಕುರಿತು ಸ್ವಲ್ಪವೂ ಚಿಂತಿಸದೇ ತಮ್ಮನ್ನು ಬಂಡುತನಕ್ಕೆ ಒಪ್ಪಿಸಿಕೊಟ್ಟು ಎಲ್ಲಾ ವಿಧವಾದ ಅಶುದ್ಧ ಕೃತ್ಯಗಳನ್ನು ಅತಿಆಸೆಯಿಂದ ನಡೆಸುವವರಾಗಿದ್ದಾರೆ. 20 ಕ್ರಿಸ್ತನ ಬೋಧನೆಯನ್ನು ಅಂಥದೆಂದು ತಿಳಿದುಕೊಳ್ಳದೆ, 21 ಕೇಳಿ ಆತನಲ್ಲಿಯೇ ಉಪದೇಶವನ್ನು ಹೊಂದಿದ್ದೀರಲ್ಲಾ. 22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. 23 ನಿಮ್ಮ ಆಂತರ್ಯದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. 24 ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ. 25 ಸುಳ್ಳಾಡುವುದನ್ನು ಬಿಟ್ಟುಬಿಟ್ಟು <<ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.>> ಏಕೆಂದರೆ; ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ. 26 ಬಂದರೂ ಪಾಪಮಾಡಬೇಡಿರಿ;>> ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ; 27 ಅವಕಾಶಕೊಡಬೇಡಿರಿ. 28 ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ದುಡಿದು ಬದುಕನ್ನು ಸಾಗಿಸಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು. 29 ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯಕ್ಕೆ ತಕ್ಕ ಮಾತನ್ನು ಆಡಿದರೆ ಕೇಳುವವರಿಗೆ ಇಂಪಾಗಿ ಹಿತವಾಗಿ ತೋರುವುದು. 30 ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಅದಕ್ಕಾಗಿ ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. 31 ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. 32 ಉಪಕಾರಿಗಳಾಗಿಯೂ, ಕರುಣೆಯುಳ್ಳವರಾಗಿಯೂ, ಕ್ಷಮಿಸುವವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದನಲ್ಲಾ;