ಅದ್ಯಾಯ 5

1 ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ. 2 ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ. 3 ಅಥವಾ ಯಾವ ವಿಧವಾದ ಅಶುದ್ಧತ್ವ, ದ್ರವ್ಯಾಶೆ, ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು; ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು. 4 ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ; ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. 5 ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. 6 ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ; ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ. 7 ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ. 8 ನೀವು ಹಿಂದಿನ ಕಾಲದಲ್ಲಿ ಕತ್ತಲೆಯಲ್ಲಿದ್ದಿರಿ, ಆದರೆ ಈಗ ನೀವು ಕ್ರಿಸ್ತನಲ್ಲಿದ್ದು ಬೆಳಕಿನಲ್ಲಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ. 9 ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ. 10 ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ. 11 ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ. 12 ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾದವು. 13 ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ. 14 - <<ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು>> ಎಂದು ಹೇಳಿಯದೆಯಲ್ಲಾ. 15 ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ. 16 ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ವ್ಯರ್ಥವಾಗಿ ಕಳೆಯದೆ ಅದನ್ನು ಬೆಲೆಯುಳ್ಳದೆಂದು ತಿಳಿದು ಉಪಯೋಗಿಸಿಕೊಳ್ಳಿರಿ. 17 ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ವಿಚಾರಿಸಿ ತಿಳಿದವರಾಗಿರಿ. 18 ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದುದರಿಂದ ಪಟಿಂಗತನವು ಹುಟ್ಟುತ್ತದೆ. ಆದ್ದರಿಂದ ಪವಿತ್ರಾತ್ಮಭರಿತರಾಗಿದ್ದು 19 ಆತ್ಮಸಂಬಂಧವಾದ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಕೊಂಡಾಡುತ್ತಾ 20 20ಕೀರ್ತನೆಗಳಿಂದಲೂ, ಸ್ತುತಿಗಳಿಂದಲೂ ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡುತ್ತಾ, 21 ಕ್ರಿಸ್ತನಿಗೆ ಭಯಪಡುವವರಾಗಿದ್ದುಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ. ಗಂಡಹೆಂಡತಿಯರೂ ತಂದೆತಾಯಂದಿರೂ ಮಕ್ಕಳೂ ಯಜಮಾನರೂ ದಾಸರೂ ನಡೆಯಬೇಕಾದ ರೀತಿ 22 ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. 23 ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನೋ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ. 24 ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು. 25 ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. 26 ಅದನ್ನು ಪ್ರತಿಷ್ಠಾಪಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. 27 ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದ ಕನ್ನಿಕೆಯೋ ಎಂಬಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ದೀಕ್ಷಾಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು. 28 ಗಂಡದಿರು ಸಹ ತನ್ನ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. 29 ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ; ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಸಂರಕ್ಷಿಸುತ್ತಾರಷ್ಟೇ. 30 ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಸಂರಕ್ಷಿಸುತ್ತಾ ಬಂದಿದ್ದಾನೆ. 31 ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.>> ಎಂದು ಬರೆದದೆಯಲ್ಲಾ. 32 ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ; ಇದುವರೆಗೆ ಗುಪ್ತವಾಗಿದ್ದ ಈ ಸತ್ಯಾರ್ಥವು ಬಹು ಗಂಭೀರವಾದದ್ದು. 33 ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು.