ಅದ್ಯಾಯ 10
ಬಲಿಷ್ಠನಾದ ದೂತನು ಕೈಯಲ್ಲಿ ಚಿಕ್ಕ ಸುರುಳಿಯನ್ನು ಹಿಡಿದುಕೊಂಡು – ಇನ್ನೂ ತಡಮಾಡದೆ ದೇವರ ರಹಸ್ಯವಾದ ಸಂಕಲ್ಪವು ನೆರವೇರುವುದೆಂದು ಪ್ರಕಟಿಸಿದ್ದು;
1
ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು.
2
ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು; ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು; ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಮೇಲಿನ .
3
ಸಿಂಹವು ಘರ್ಜಿಸುವ ಪ್ರಕಾರ ಮಹಾ ಶಬ್ದದಿಂದ ಕೂಗಿದನು.
4
ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ – <<ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಗುಪ್ತವಾಗಿಡು>> ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.
5
ಅನಂತರ ಸಮುದ್ರದ ಮೇಲೆಯೂ, ಭೂಮಿಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ
6
ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ
7
ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು - <<ಇನ್ನು ತಡಮಾಡದೆ; ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಎಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು>> ಎಂದು ಹೇಳಿದನು.
8
ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ - <<ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ>> ಎಂದು ಹೇಳಿತು.
9
ನಾನು ಆ ದೂತನ ಬಳಿಗೆ ಹೋಗಿ - <<ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ - ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು>> ಎಂದು ಹೇಳಿದನು.
10
ಆಗ ನಾನು ಆ ಕಿರು ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಗಿಹೋಯಿತು.
11
ಆ ದೂತನು ನನಗೆ, <<ನೀನು ಇನ್ನೂ ಅನೇಕರನ್ನು, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕಾಗಿದೆಯೆಂದು>> ಆಜ್ಞಾಪಿಸಿದನು.